ಬೆಂಗಳೂರು : ಈಗಾಗಲೇ ರಾಜ್ಯ ಸರ್ಕಾರದಿಂದ ಶಾಲೆಗಳಿಗೆ ಅಕ್ಟೋಬರ್ 30,2020ರವರೆಗೆ ಮಧ್ಯಂತರ ರಜೆಯನ್ನು ಘೋಷಣೆ ಮಾಡಲಾಗಿತ್ತು. ಇದೀಗ ರಾಜ್ಯದ ಪದವಿಪೂರ್ವ ಉಪನ್ಯಾಸಕರಿಗೂ ನವೆಂಬರ್1, 2020ರವರೆಗೆ ರಜೆಯನ್ನು ರಾಜ್ಯ ಸರ್ಕಾರ ಘೋಷಿಸಿದೆ.
ಮಾಜಿ ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ಅವರು, ಶಾಲೆಗಳಿಗೂ ರಜೆ ಘೋಷಿಸಿದಂತೆ ಪದವಿಪೂರ್ವ ಕಾಲೇಜು ಉಪನ್ಯಾಸಕರಿಗೂ ರಜೆ ಘೋಷಿಸುವಂತೆ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೂ ಅಕ್ಟೋಬರ್ 21ರಿಂದ ನವೆಂಬರ್ 1ರವರೆಗೆ ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಿದೆ.
ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಟ್ವಿಟ್ ಮಾಡಿದ್ದು, ದಿನಾಂಕ.21.10.2020 ರಿಂದ 01.11.2020 ರವರೆಗೆ ಪದವಿಪೂರ್ವ ಶಿಕ್ಷಣ ಉಪನ್ಯಾಸಕರುಗಳಿಗೆ ದಸರಾ ರಜೆ ಘೋಷಿಸಲು ಇಲಾಖಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
-ವಸಂತ ಬಿ ಈಶ್ವರಗೆರೆ
No comments:
Post a Comment