Sunday, 11 October 2020

ಖ್ಯಾತ ಸಂಗೀತ ನಿರ್ದೇಶಕ ರಾಜನ್ ನಿಧನ.

ಕನ್ನಡ, ತೆಲುಗು ಸೇರಿದಂತೆ ವಿವಿಧ ಭಾಷೆಗಳ ನೂರಾರು ಸಿನಿಮಾಗಳಿಗೆ ಸಂಗೀತ ನೀಡಿದ್ದ ಖ್ಯಾತ ಸಂಗೀತ ನಿರ್ದೇಶಕ ರಾಜನ್ (87) ಭಾನುವಾರ ರಾತ್ರಿ ನಿಧನಹೊಂದಿದ್ದಾರೆ.


ಕನ್ನಡ ಚಿತ್ರರಂಗದ 200 ಕ್ಕೂ ಹೆಚ್ಚು ಸಿನಿಮಾಗಳು ಸೇರಿದಂತೆ ತಮಿಳು, ತೆಲುಗು, ಮಲಯಾಳಂ, ಹಿಂದಿ, ತುಳು ಹಾಗೂ ಶ್ರೀಲಂಕಾದ ಸಿಂಹಳ ಭಾಷೆ ಸೇರಿ ಒಟ್ಟು 375 ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದರು. ಲಕ್ಷ್ಮೀ ಎಂಬ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುವ ಮೂಲಕ ಕನ್ನಡ ಚಿತ್ರರಂಗಕ್ಕೆ ರಾಜನ್ ಪಾದರ್ಪಣೆ ಮಾಡಿದರು. ನಂತರ ಸಂಚಲ ಕುಮಾರಿ, ರಾಜಲಕ್ಷ್ಮೀ, ಮುತ್ತೈದೆ ಭಾಗ್ಯ ಸೇರಿದಂತೆ ಹಲವು ಸಿನಿಮಾಗಳಿಗೆ ಸಂಗೀತ ನಿರ್ದೇಶ ಮಾಡಿದರು. ಆದರೆ ಇವರಿಗೆ ಡಾ.ರಾಜ್ ಕುಮಾರ್ ಅವರ ಗಂಧದ ಗುಡಿ ಸಿನಿಮಾ ಹೆಚ್ಚು ಜನಪ್ರಿಯತೆ ತಂದುಕೊಟ್ಟಿತು.

No comments:

Post a Comment