ನವದೆಹಲಿ : ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ದೇಶದ ಜನತೆಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಭರ್ಜರಿ ಸಿಹಿಸುದ್ದಿ ಸಿಗುವ ಸಾಧ್ಯತೆ ಇದ್ದು, ಈ ವರ್ಷದ ಅಂತ್ಯಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ.
ಕೊರೊನಾದಿಂದಾಗಿ ತತ್ತರಿಸಿರುವ ಸಾರಿಗೆ, ಆಹಾರ, ಪ್ರವಾಸೋದ್ಯಮ ವಲಯ ಕೇಂದ್ರೀಕರಿಸಿ ಕೇಂದ್ರ ಸರ್ಕಾರವು ಶೀಘ್ರವೇ ಮತ್ತೊಂದು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಪ್ರವಾಸೋದ್ಯಮ, ಆಹಾರ ವಲಯ ಚೇತರಿಸಿಕೊಂಡರೇ ದೇಶದಲ್ಲಿ ಉದ್ಯೋಗಾವಕಾಶ ಹೆಚ್ಚಳವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಾರಿಗೆ, ಆಹಾರ, ಪ್ರವಾಸೋದ್ಯಮ ವಲಯಕ್ಕೆ ಕೇಂದ್ರ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
No comments:
Post a Comment