ಮಡಿಕೇರಿ: ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ದರ್ಶನ ನೀಡಿದ್ದಾರೆ.
ಇಂದು ಬೆಳಗ್ಗೆ 7 ಗಂಟೆ 3 ನಿಮಿಷಕ್ಕೆ ಕನ್ಯಾಲಗ್ನದಲ್ಲಿ ತೀರ್ಥೋದ್ಭವವಾಗಿದೆ. ಬ್ರಹ್ಮಕುಂಡಿಕೆಯ ಬಳಿ ಗೋಪಾಲ್ ಕೃಷ್ಣ ಆಚಾರ್ ನೇ ತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯ ನೆರವೇರುತ್ತಿದ್ದು, ಬ್ರಹ್ಮ ಕುಂಡಿಕೆ, ಅಗಸ್ತೇಶ್ವರ ದೇವಾಲಯ ಮತ್ತು ಭಾಗಮಂಡಲ ದೇವಾಲಯಗಳಿಗೆ ವಿದ್ಯುತ್ ದೀಪ ಮತ್ತು ಪುಷ್ಪಾಲಂಕಾರ ಮಾಡಲಾಗಿದೆ
ಕೋವಿಡ್ ಮಿತಿ ಮೀರುತ್ತಿರುವುದರಿಂದ ತೀರ್ಥೋಧ್ಭವ ಸಂದರ್ಭದಲ್ಲಿ ದೇವಾಲಯ ಅರ್ಚಕರು, ಸಿಬ್ಬಂದಿ ಮತ್ತು ಉಸ್ತುವಾರಿ ಸಚಿವರು ಹಾಗೂ ಕೆಲವೇ ಅಧಿಕಾರಿಗಳಿಗೆ ಮಾತ್ರವೇ ಭಾಗವಹಿಸಲು ಅವಕಾಶ ನೀಡಲಾಗಿದೆ. ತೀರ್ಥೋಧ್ಭವದ ಬಳಿಕ ಭಕ್ತರು ತಲಕಾವೇರಿಗೆ ಬಂದು ತೀರ್ಥ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ತೀರ್ಥ ಪಡೆದುಕೊಳ್ಳಲು ನೂಕುನುಗ್ಗಲು ಆಗದಂತೆ ಕೊಳದ ಸುತ್ತಮುತ್ತ ಬ್ಯಾರಿಕೇಡ್ ಅಳವಡಿಸಲಾಗಿದೆ. ತೀರ್ಥ ವಿತರಣೆಗೆ ಐದು ಕೌಂಟರ್ ತೆರಯಾಗಿದ್ದು, ಪ್ರತೀ ಕೌಂಟರ್ ಬಳಿ ತಲಾ ಎರಡು ಮೂರು ಕೊಳಾಯಿಗಳನ್ನು ಇಟ್ಟು ವ್ಯವಸ್ಥೆ ಮಾಡಲಾಗಿದೆ. ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬರುವ ಭಕ್ತರಿಗೆ ಕೋವಿಡ್ ಟೆಸ್ಟ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ.
No comments:
Post a Comment