'ಗಟ್ಟಿಮೇಳ' ಧಾರಾವಾಹಿಯಲ್ಲಿ ಆರತಿ ಪಾತ್ರದ ಅಶ್ವಿನಿ ಕನ್ನಡಿಗರ ಮನೆಮಾತಾಗಿದ್ದಾರೆ. ಸಂಪ್ರದಾಯಸ್ಥ ಕುಟುಂಬದ ಹೆಣ್ಣು ಮಗಳಾಗಿ ಆರತಿ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಅಶ್ವಿನಿ 'ನಾಗಭೈರವಿ'ಯ ಅವತಾರದ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಮುಂದೆ ಓದಿ...
ಎರಡು ಶೇಡ್ ಗಳಲ್ಲಿ ಅಶ್ವಿನಿ ಮಿಂಚಿಂಗ್
ತೆಲುಗಿನ 'ನಾಗಭೈರವಿ' ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಅಶ್ವಿನಿ ಎರಡು ಶೇಡ್ ನಲ್ಲಿ ಮಿಂಚುತ್ತಿದ್ದಾರೆ. ನಾಗದೇವತೆ ಮತ್ತು ಬುಡಕಟ್ಟು ಜನಾಂಗದ ಹುಡುಗಿಯಾಗಿ ಅಭಿನಯಿಸುತ್ತಿದ್ದಾರೆ. ಈ ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿರುವ ಆರತಿ, 6 ಕೆಜಿ ತೂಕವನ್ನು ಇಳಿಸಿಕೊಂಡು ಸಣ್ಣಗಾಗಿದ್ದಾರೆ.
ಪ್ರಮುಖ ಪಾತ್ರದಲ್ಲಿ ರಮ್ಯಾ ಕೃಷ್ಣ
ವಿಶೇಷ ಅಂದರೆ ಈ ಧಾರಾವಾಹಿಯಲ್ಲಿ ಖ್ಯಾತ ನಟಿ ರಮ್ಯಾ ಕೃಷ್ಮ ಸಹ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಧಾರಾವಾಹಿಯ ಪ್ರೋಮೋ ರಿಲೀಸ್ ಆಗಿದ್ದು, ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಟಾಲಿವುಡ್ ಗೆ ಎಂಟ್ರಿ ಕೊಟ್ಟ ಮಾತ್ರಕ್ಕೆ ಕನ್ನಡ ಕಿರುತೆರೆಯಿಂದ ದೂರ ಆಗಲ್ಲ ಎನ್ನುತ್ತಿದ್ದಾರೆ ಅಶ್ವಿನಿ. ಅಲ್ಲದೆ ದೊಡ್ಡ ಪರದೆ ಮೇಲೆ ಮಿಂಚುವ ದೊಡ್ಡ ಕನಸು ಇಟ್ಟುಕೊಂಡಿದ್ದಾರೆ. ಈ ಧಾರಾವಾಹಿ ಬಣ್ಣದ ಬದುಕಿಗೆ ದೊಡ್ಡ ತಿರುವು ನೀಡುವ ನಿರೀಕ್ಷೆಯಲ್ಲಿದ್ದಾರೆ.
ಧಾರಾವಾಹಿಯಲ್ಲಿ ಸಾಹಸ ಮತ್ತು ನೃತ್ಯ ದೃಶ್ಯಗಳೇ ಜಾಸ್ತಿ
ಭಾಷೆ ಬೇರೆಯಾಗಿರಬಹುದು ಭಾವವೊಂದೇ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು ಅಶ್ವಿನಿ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಧಾರಾವಾಹಿಯಲ್ಲಿ ಸಾಕಷ್ಟು ಸಾಹಸ ದೃಶ್ಯಗಳಿವೆಯಂತೆ. ವಿಶೇಷ ಅಂದರೆ ನಟಿ ಅನುಷ್ಕಾ ಶೆಟ್ಟಿಗೆ ಸಾಹಸ ಹೇಳಿಕೊಟ್ಟ ಫೈಟ್ ಮಾಸ್ಟರ್, ಅಶ್ವಿನಿಗೂ ಸಾಹಸ ದೃಶ್ಯ ಹೇಳಿಕೊಟ್ಟಿದ್ದಾರಂತೆ. ಸಾಹಸ ಮತ್ತು ನೃತ್ಯ ದೃಶ್ಯಗಳು ಜಾಸ್ತಿ ಇರುವ ಕಾರಣ ಅಶ್ವಿನಿ ಈ ಧಾರಾವಾಹಿಗೆ ಹೆಚ್ಚು ಸಮಯ ನೀಡುತ್ತಿದ್ದಾರಂತೆ.
ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿದ್ದ ಅಶ್ವಿನಿ
ನಟಿ ಅಶ್ವಿನಿ 'ಗಟ್ಟಿಮೇಳ' ಧಾರಾವಾಹಿಯಲ್ಲಿ ಅಭಿನಯಿಸುವ ಮೊದಲು 'ರಾಧಾ ರಮಣ' ಧಾರಾವಾಹಿಯಲ್ಲಿ ನಟಿಸಿದ್ದರು. ಈ ಧಾರಾವಾಹಿಯಲ್ಲಿ ಅಶ್ವಿನಿ, ಪ್ರಮುಖ ಪಾತ್ರಧಾರಿ ರಮಣನ ತಂಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಮುಗ್ದ ಹುಡುಗಿ ಪಾತ್ರದಲ್ಲಿ ಮಿಂಚಿದ್ದರು. ಇದೀಗ 'ನಾಗ ಬೈರವಿ' ಮೂಲಕ ಇದುವರೆಗೂ ಮಾಡಿದ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
No comments:
Post a Comment